Connect with us

    KARNATAKA

    ಹಿಟ್ ಆಂಡ್ ರನ್ ಕೇಸ್ ನಲ್ಲಿ ಗಿಚ್ಚಗಿಲಿಗಿಲಿ ಕಲಾವಿದ ಚಂದ್ರಪ್ರಭಾ

    ಚಿಕ್ಕಮಗಳೂರು ಸೆಪ್ಟೆಂಬರ್ 06: ಗಿಚ್ಚಗಿಲಿ ಗಿಲಿ ಕಾಮಿಡಿ ಕಾರ್ಯಕ್ರಮದ ಕಲಾವಿದ ಚಂದ್ರಪ್ರಭಾಗೆ ಸೇರಿದ ಕಾರೊಂದು ಚಿಕ್ಕಮಗಳೂರಿನಲ್ಲಿ ಅಪಘಾತ ನಡೆಸಿ ಪರಾರಿಯಾದ ಘಟನೆ ನಡೆದಿದೆ.


    ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮಾಲ್ತೇಶ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾಮಿಡಿ ಕಿಲಾಡಿ ಚಂದ್ರಪ್ರಭಾ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಮಾಲ್ತೇಶ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಚಿಕ್ಕಮಗಳೂರು ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply