ಬೆಂಗಳೂರು, ಡಿಸೆಂಬರ್ 08: ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಆರಂಭದಲ್ಲಿ ಜಾಮೀನು ಪಡೆದು ಹಾಯಾಗಿ ಹೊರಗೆ ಸುತ್ತಾಡಿಕೊಂಡಿದ್ದ ಅವರು ಸುಪ್ರೀಂಕೋರ್ಟ್ ಬೇಲ್ ರದ್ದು ಮಾಡುತ್ತಿದ್ದಂತೆ ಮರಳಿ ಜೈಲು ಸೇರಿದ್ದಾರೆ. ಈಗ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಕಠಿಣವಾಗಿದ್ದು, ದರ್ಶನ್ ತತ್ತರಿಸಿ ಹೋಗಿದ್ದಾರಂತೆ. ಸಹ ಕೈದಿಗಳಿಗೆ ಅವರು ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.

ದರ್ಶನ್ ಈ ಬಾರಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಲ್ಲವೂ ಬದಲಾಗಿದೆ. ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ.

ಯಾರ್ಯಾರು ಇದ್ದಾರೆ ದರ್ಶನ್ ಜೊತೆ?

ದರ್ಶನ್ ಜೊತೆ ಒಂದೇ ಸೆಲ್​ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್​ ಅಲ್ಲಿ  ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ.

Share Information