Connect with us

    FILM

    ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ – ಮಾಧ್ಯಮಗಳಿಗೆ ನಟ ದರ್ಶನ ಪತ್ರ

    ಬೆಂಗಳೂರು ಎಪ್ರಿಲ್ 25: ಮಾಧ್ಯಮಗಳಿಗೆ ಮನಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾಧ್ಯಮಗಳಿಂದ ಬಹಿಷ್ಕಾರಕ್ಕೆ ಒಳಗಾಗಿದ್ದ ನಟ ದರ್ಶನ ಇದೀಗ ಮಾಧ್ಯಮಗಳಿಗೆ ತಮ್ಮ ಮಾತಿನ ಬಗ್ಗೆ ವಿಷಾದ ವ್ಯಕ್ತಪಡಿಸಿದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


    ಮಾಧ್ಯಮದವರ ಬಗ್ಗೆ ನಟ ದರ್ಶನ್‌ ಅವರು ಕೆಲ ಸಮಯದ ಹಿಂದೆ ಹೇಳಿದ ಮಾತುಗಳು ಮಾಧ್ಯಮದವರಿಗೆ ನೋವುಂಟು ಮಾಡಿತ್ತು. ಇದಾದ ಬಳಿಕ ದೃಶ್ಯ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮಗಳು ದರ್ಶನ್‌ ಅವರ ಸಿನಿಮಾ ಸುದ್ದಿ ಸೇರಿದಂತೆ ಇತರೆ ಸುದ್ದಿಯನ್ನು ಪ್ರಸಾರ ಮತ್ತು ಪ್ರಕಟ ಮಾಡುವುದನ್ನು ನಿರ್ಬಂಧಿಸಿ ಅಘೋಷಿತವಾಗಿ ನಿರ್ಧರಿಸಲಾಗಿತ್ತು. ಇದೀಗ ನಟ ದರ್ಶನ್‌ ಅವರು ತಾವು ಆಡಿದ ಮಾತುಗಳು ಮಾಧ್ಯಮ ಮಿತ್ರರಿಗರ ನೋವುಂಟಾಗಿದ್ದರೆ ವಿಷಾದ ವ್ಯಕ್ತಪಡಿಸಿ ಬರೆದ ಪತ್ರವೊಂದು ಕೆಲ ಮಾಧ್ಯಮಗಳ ಕಚೇರಿಗೆ ತಲುಪಿದೆ ಎನ್ನಲಾಗಿದೆ.

    75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ, ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್, ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನತೆ ಮೆಟ್ಟಿಕೊಂಡು ಮೆರೆಸಿದರು. ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ. ಈ ಸಾಲಿನಲ್ಲಿ ಇದ್ದಂತಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ ರವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ಸಾರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆಶೀರ್ವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ. ನಾನು ಸಹ ಮುಂದಿನ ದಿನಗಳಲ್ಲಿ ಮಾಡಿರುವಂತ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವನು.

    ಅದೇ ರೀತಿಯಲ್ಲಿ. ನಿಜ ಜೀವನದಲ್ಲಿ ಸಹ ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬ ಚಿಕ್ಕದ್ದು, ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕೆಂದಿದ್ದಾರೆ.

    ಪತ್ರದ ಕೆಳಗೆ ನಟ ದರ್ಶನ್‌ ಅವರ ಸಹಿಯಿದೆ. ಹಾಗಾಗಿ ಇದನ್ನು ಅವರೇ ಬರೆದಿದ್ದಾರೆ ಎನ್ನಲಾಗಿದೆ. ಸದ್ಯ ಅಭಿಮಾನಿಗಳ ವಲಯದಲ್ಲಿ ಈ ಪತ್ರ ವೈರಲ್‌ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply