Connect with us

FILM

ನಟ ದಿಗಂತ್ ಕತ್ತಿಗೆ ಬಲವಾದ ಪೆಟ್ಟು, ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್​

ಗೋವಾ, ಜೂನ್ 21: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ  ದಿಗಂತ್ ಕುತ್ತಿಗೆಗೆ  ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್  ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ.

ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್  ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.

ನಟ ದಿಗಂತ್​ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  ಈಕುರಿತು ಇನ್ನಷ್ಟು ಮಾಹಿತಿ ಬರಬೇಕಾಗಿದೆ.

Advertisement
Click to comment

You must be logged in to post a comment Login

Leave a Reply