Connect with us

FILM

ಕೊರೊನಾಗೆ ಬಲಿಯಾದ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್

ಮುಂಬೈ : ಕೊರೊನಾ ಸೊಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಕರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 34 ವರ್ಷ ಪ್ರಾಯದ ದಿವ್ಯಾ ಭಟ್ನಾಗರ್ ಅವರಿಗೆ ಕಳೆದವಾರ ಕೊರೊನಾ ಸೋಂಕು ದೃಢಪಟ್ಟ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟ ಕಾರಣ ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತು.


34 ವರ್ಷದ ದಿವ್ಯ ನಿನ್ನೆ ರಾತ್ರಿ 3 ಗಂಟೆಗೆ ನಿಧನರಾಗಿದ್ದಾರೆ. ಆಕೆ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ನನಗೆ ಮತ್ತು ಆಕೆಯ ಕುಟುಂಬಕ್ಕೆ ಇದು ದೊಡ್ಡ ಆಘಾತವಾಗಿದ್ದು, ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
ನವೆಂಬರ್ 26 ರಂದು ಅನಾರೋಗ್ಯಕ್ಕೀಡಾಗಿದ್ದ ದಿವ್ಯಾ ಆಸ್ಪತ್ರೆಗೆ ದಾಖಲಾಗಿದ್ದರು, ಆಕೆಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ನಾನು ಮತ್ತು ನನ್ನ ಪುತ್ರ ಮುಂಬಯಿಗೆ ಆಗಮಿಸಿದೆವು. ಆಕೆಯ ಆರೋಗ್ಯ ತೀವ್ರ ಹದಗೆಟ್ಟಿದ್ದು, ವೆಂಟಿಲೇಟರ್ ನಲ್ಲಿ ಇಟ್ಟಿದ್ದರು ಎಂದು ದಿವ್ಯಾ ತಾಯಿ ತಿಳಿಸಿದ್ದಾರೆ.

Facebook Comments

comments