FILM
ನವಗ್ರಹದಲ್ಲಿ ನಟಿಸಿದ್ದ ನಟ ಗಿರಿ ದಿನೇಶ್ ಹೃದಯಾಘಾತದಿಂದ ನಿಧನ

ಬೆಂಗಳೂರು ಫೆಬ್ರವರಿ 08: ದರ್ಶನ ಅಭಿನಯದ ನವಗ್ರಹ ಚಿತ್ರದಲ್ಲಿ ನಟಿಸಿದ್ದ ಹಿರಿಯ ಹಾಸ್ಯನಟ ದಿವಂಗತ ದಿನೇಶ್ ಅವರ ಮಗ ಗಿರಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬದಿದೆ. ಹೃದಯಾಘಾತದಿಂದ ಸಾವು ಕಂಡಿದ್ದಾರೆ ಎಂದು ವರದಿಯಾಗಿದೆ. ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಹೆಚ್ಚಿನ ಹೆಸರು ತಂದುಕೊಟ್ಟಿತ್ತು.

Continue Reading
2 Comments