ಮುಂಬೈ ಸೆಪ್ಟೆಂಬರ್ 05: ಸಿನೆಮಾ ನಟಿಯೊಬ್ಬರನ್ನು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಮಹಾರಾಷ್ಟ್ರದ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಪೊಲೀಸ್ ಕಾರ್ಯಾಚರಣೆ ವೇಳೆ ಇಬ್ಬರು ಧಾರವಾಹಿ ನಟಿಯರನ್ನು ರಕ್ಷಣೆ ಮಾಡಲಾಗಿದೆ.

ಬಂಧಿತ ಆರೋಪಿ ಅನುಷ್ಕಾ ಮೋನಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ನಟಿಸುತ್ತಿದ್ದಳು. ನಟಿಯರಾಗಲು ಬಯಸಿ ಬರುವ ಯುವತಿಯರನ್ನು ಬಲವಂತವಾಗಿ ಹಾಗೂ ಅಕ್ರಮವಾಗಿ ಈ ವೃತ್ತಿಗೆ ತಳ್ಳುತ್ತಿದ್ದಳು ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ರಹಸ್ಯ ಕಾರ್ಯಾಚರಣೆ ಮೂಲಕ ಅನುಷ್ಕಾ ಮೋನಿಯನ್ನು ಬಂಧಿಸಲಾಗಿದೆ. ಹಾಗೂ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು ಇವರು ಕೂಡ ಧಾರಾವಾಹಿ ಹಾಗೂ ಬಾಂಗ್ಲಾ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ. ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿರುವ ಮಾಲ್‌ನಲ್ಲಿ ಗಿರಾಕಿಗಳಿಗೆ ಯುವತಿರನ್ನು ಅನುಷ್ಕಾ ಭೇಟಿ ಮಾಡಿಸುತ್ತಿದ್ದಳು ಎಂದು ಅವರು ಹೇಳಿದ್ದಾರೆ. ಘಟನೆ ಸಂಬಂಧ ದೂರು ದಾಖಲು ಮಾಡಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಎಸಿಪಿ ಬಲ್ಲಾಳ್ ಹೇಳಿದ್ದಾರೆ.



