Connect with us

    FILM

    “ಮಂಗಳೂರು ಮಂಜುನಾಥ” ಖ್ಯಾತಿಯ ಕನ್ನಡದ ಖ್ಯಾತ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ

    “ಮಂಗಳೂರು ಮಂಜುನಾಥ” ಖ್ಯಾತಿಯ ಕನ್ನಡದ ಖ್ಯಾತ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ

    ಬೆಂಗಳೂರು ಜನವರಿ 18: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅವರು ಗುರುವಾರ ವಿಧಿವಶರಾಗಿದ್ದಾರೆ.

    ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಕಾಶಿನಾಥ್ ಅವರು ಕಳೆದೆರಡು ದಿನಗಳಿಂದ ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

    ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದರು, ಅನುಭವ, ಅಜಗಜಾಂತರ, ಅನಂತನ ಅವಾಂತರ, ಅಪರಿಚಿತ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ನಿರ್ದೇಶಿಸಿದ್ದ ನಟ ಕಾಶೀನಾಥ್ ಮೃತಪಟ್ಟಿದ್ದಾರೆ. ಇತ್ತೀಚಿಗೆ ನಂದ ಕಿಶೋರ್ ನಿರ್ದೆಶನದ ಚೌಕ ಚಿತ್ರದಲ್ಲೂ ನಟಿಸಿದ್ದರು.

    ಉಪೇಂದ್ರ, ಮನೋಹರ್, ಸುನಿಲ್ ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದ ಕಾಶಿನಾಥ್ ಅವರು ತಮ್ಮ ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ಕೈಚಳಕ ತೋರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ ಚಿತ್ರಗಳು ಕಾಶಿನಾಥ್ ಅವರ ಪ್ರಮುಖ ಚಿತ್ರಗಳಾಗಿದ್ದು, ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯತೆಯನ್ನು ಗಳಿಸಿತ್ತು,

    Share Information
    Advertisement
    Click to comment

    You must be logged in to post a comment Login

    Leave a Reply