Connect with us

FILM

ಕನ್ನಡದ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

ಬೆಂಗಳೂರು ಜನವರಿ 23: ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು, ಕನ್ನಡದ ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ನಟ ಲಕ್ಷ್ಮಣ್ ಗಮನ ಸೆಳೆದಿದ್ದರು.


ಭಾನುವಾರ ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ವೃತ್ತಿ ಜೀವನದಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ಲಕ್ಷ್ಮಣ್ ಬಣ್ಣ ಹಚ್ಚಿದ್ದರು. ‘ಒಲವಿನ ಉಡುಗೊರೆ’, ‘ಸಾಂಗ್ಲಿಯಾನ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಅಂಬರೀಷ್​, ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಕನ್ನಡದ ದಿಗ್ಗಜರ ಜೊತೆ ಅವರು ತೆರೆ ಹಂಚಿಕೊಂಡಿದ್ದರು.

 

Advertisement
Click to comment

You must be logged in to post a comment Login

Leave a Reply