DAKSHINA KANNADA
ಖ್ಯಾತ ಮಲೆಯಾಳಂ ನಟ ಮೋಹನ್ ಲಾಲ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ
ಖ್ಯಾತ ಮಲೆಯಾಳಂ ನಟ ಮೋಹನ್ ಲಾಲ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ
ಮಂಗಳೂರು ಫೆಬ್ರವರಿ 15: ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಮಲೆಯಾಳಂ ನಟ ಮೋಹನ್ ಲಾಲ್ ಇಂದು ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೋಹನ್ ಲಾಲ್ ನಟನೆಯ ಮಲಯಾಳಂ ಚಲನಚಿತ್ರ ಕಾಯಂಕುಳಂ ಕೊಚ್ಚುನ್ನಿ ಚಿತ್ರದ ಚಿತ್ರೀಕರಣ ಪುತ್ತೂರು ತಾಲೂಕಿನ ಕಡಬದ ಬಲ್ಯ ಹಾಗೂ ಪದವು ಎಂಬಲ್ಲಿ ನಡೆಯುತ್ತಿದೆ.
ಈ ಹಿನ್ನಲೆಯಲ್ಲಿ ಮೋಹನ್ ಲಾಲ್ ಅವರಿಗೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ, ಇಂದು ಮೋಹನ್ ಲಾಲ್ ಸಹ ನಟರೊಂದಿಗೆ ಸುಬ್ರಹ್ಮಣ್ಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೋಹನ್ ಲಾಲ್ ಅಭಿಮಾನಿಗಳು ನೆಚ್ಚಿನ ನಟನೊಂದಿಗೆ ಸೆಲ್ಫಿ ತೆಗೆದು ಸಂಭ್ರಮಿಸಿದ್ದಾರೆ.
You must be logged in to post a comment Login