Connect with us

KARNATAKA

ಹುಬ್ಬಳ್ಳಿ – ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? – ಪ್ರಥಮ್

ಹುಬ್ಬಳ್ಳಿ ಎಪ್ರಿಲ್ 22: ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು? ಹಿಂದೂ ಹುಡುಗಿಯರ ಜೊತೆ ನೀವು ಲವ್​ ಯಾಕೆ ಮಾಡುತ್ತೀರಿ? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ, ನಿಮ್ಮ ಸಮುದಾಯದವರನ್ನೇ ಮದುವೆ ಆಗಿ. ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ? ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಇನ್ನೊಮ್ಮೆ ಹಿಂದೂಗಳ ತಂಟೆಗೆ ಬರಬೇಡಿ’ ಎಂದು ನಟ ಪ್ರಥಮ್​ ಹೇಳಿದ್ದಾರೆ.

ಹುಬ್ಬಳ್ಳಿ ವಿಧ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ನಟ ಪ್ರಥಮ್​ ಅವರು ನೇಹಾ ತಂದೆ-ತಾಯಿಯನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕಲಾವಿದರು ಎಲೆಕ್ಷನ್​ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. ಅಂಥ ಕಲಾವಿದರನ್ನು ತಲೆ ಮೇಲೆ ಇಟ್ಟುಕೊಂಡು ಮೆರೆಸಬೇಡಿ ಎಂದರು.

ನನಗೆ ತುಂಬ ನೋವಾಯಿತು. ಅದಕ್ಕಾಗಿಯೇ ಬೆಂಗಳೂರಿನಿಂದ ಇಲ್ಲಿಗೆ ಬಂದಿದ್ದೇನೆ. ಕಡೆಗಣಿಸಿದರೆ ಪ್ರಾಣ ತೆಗೆದುಬಿಡೋದಾ? ನನ್ನ ಮಗ ಅಂಥವನಲ್ಲ ಎಂದು ಅವರ ತಾಯಿ ಹೇಳ್ತಾರೆ. ವೀರಪ್ಪ ನಾಯಕ ಸಿನಿಮಾದ ಕಥೆ ರೀತಿ ಹೇಳಿಕೆ ನೀಡ್ತಾರೆ. 20 ವರ್ಷದ ಹಿಂದೆ ಇವರು ಸಿಕ್ಕಿದ್ದಿದ್ರೆ ನಿರ್ದೇಶಕರು ಶ್ರುತಿ ಬದಲಿಗೆ ಇವರನ್ನೇ ಆಯ್ಕೆ ಮಾಡುತ್ತಿದ್ದರು’ ಎಂದಿದ್ದಾರೆ ಪ್ರಥಮ್​.

Share Information
Continue Reading
Advertisement
Click to comment

Leave a Reply

Your email address will not be published. Required fields are marked *