Connect with us

    FILM

    ನಟ ಪುನೀತ್ ರಾಜ್ ಕುಮಾರ್ ಅಸ್ವಸ್ಥ: ಅಸ್ಪತ್ರೆಗೆ ದಾಖಲು

    ಬೆಂಗಳೂರು, ಅಕ್ಟೋಬರ್ 29: ನಟ ಪುನೀತ್‌ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ  ಹಿನ್ನಲೆ ಪುನೀತ್ ರಾಜ್ ಕುಮಾರ್ ರವರು ಅಸ್ವಸ್ಥಗೊಂಡಿದ್ದು ತಕ್ಷಣ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಸದ್ಯದ ಮಾಹಿತಿ ಪ್ರಕಾರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗೆ ಇದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply