Connect with us

    LATEST NEWS

    ಅಲೆವೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ

    ಉಡುಪಿ ಸೆಪ್ಟೆಂಬರ್ 11: ಕನ್ನಡದ ಖ್ಯಾತ ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಲೆವೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿ ದೇವರ ದರ್ಶನ ಪಡೆದರು.


    ಅಲೆಮೂರಿನ ಗುಡ್ಡೆಯಂಗಡಿ ಜಂಕ್ಷನ್ ನಲ್ಲಿ ಕಳೆದ 37 ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ರಕ್ಷಿತ್ ಶೆಟ್ಟಿ ತಂದೆ ತಾಯಿ ಅಣ್ಣ ಅತ್ತಿಗೆ ಮತ್ತು ಮಕ್ಕಳ ಜೊತೆ ಆಗಮಿಸಿ ದೇವರ ದರ್ಶನ ಮಾಡಿದರು. ಶೆಟ್ಟಿ ಕುಟುಂಬದ ವತಿಯಿಂದ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

    ರಕ್ಷಿತ್ ಶೆಟ್ಟಿ ವೈಯಕ್ತಿಕ ಮತ್ತು ವೃತ್ತಿ ಜೀವನ ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಕೆ ಮಾಡಲಾಯ್ತು. ರಕ್ಷಿತ್ ಕುಟುಂಬ ಅಲೆವೂರು ಕಟ್ಟೆ ಗಣಪತಿಯ ಪ್ರಸಾದ ಸ್ವೀಕರಿಸಿದರು. ಲೆಟ್ಸ್ ಕಿಲ್ ಗಾಂಧಿ ಎಂಬ ಕಿರುಚಿತ್ರದ ಮೂಲಕ ರಕ್ಷಿತ್ ಬಣ್ಣದ ಬದುಕನ್ನು ಆರಂಭ ಮಾಡಿದ್ದರು. ಆ ಸಂದರ್ಭ ಅಲೆವೂರು ಕಟ್ಟೆ ಗಣಪತಿ ಗುಡಿಯಲ್ಲೇ ಮೊದಲ ಪೂಜೆ ಸಲ್ಲಿಕೆ ಮಾಡಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply