DAKSHINA KANNADA
ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

ಮಂಗಳೂರು, ಡಿಸೆಂಬರ್ 08: ಕಾಂತಾರ ನಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.
ಪತ್ನಿ ಪ್ರಗತಿ ಜೊತೆ ಆಗಮಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ದೇವಳದ ವತಿಯಿಂದ ಆತ್ಮೀಯತೆಯಿಂದ ದೇವರ ಶೇಷ ವಸ್ತ್ರ, ಪ್ರಸಾದ ನೀಡಿ ಆಡಳಿತ ಮಂಡಳಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನೆಚ್ಚಿನ ನಟನ ಜೊತೆ ಸೆಲ್ಪಿಗಾಗಿ ಅಭಿಮಾನಿಗಳು ದೇವಸ್ಥಾನದ ಮುಂಭಾಗ ಅಭಿಮಾನಿಗಳು ಮುಗಿಬಿದ್ದಿದ್ದರು.
