Connect with us

    LATEST NEWS

    ಖ್ಯಾತ ಬಾಲಿವುಡ್ ನಟಿ ಶ್ರೀದೇವಿ ಇನ್ನಿಲ್ಲ

    ಖ್ಯಾತ ಬಾಲಿವುಡ್ ನಟಿ ಶ್ರೀದೇವಿ ಇನ್ನಿಲ್ಲ

    ಮುಂಬಯಿ ಫೆಬ್ರವರಿ 25: ಖ್ಯಾತ ಬಾಲಿವುಡ್ ನಟಿ ಶ್ರೀದೇವಿ ತೀವ್ರ ಹೃದಯಾಘಾತದಿಂದ ದುಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ ಸುಮಾರು 54 ವರ್ಷ ವಯಸ್ಸಾಗಿತ್ತು. ದುಬೈ ನಲ್ಲಿ ಸಂಬಂಧಿ ಮೋಹಿತ್ ವರ್ಮಾ ಅವರ ವಿವಾಹ ಸಮಾರಂಭಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಅವರ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.


    1963ರ ಆಗಸ್ಟ್ 13 ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲೇ ತಮಿಳಿನ ‘ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತು


    13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್‍ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು. ಒಂದು ಕಾಲದಲ್ಲಿ ಬಾಲಿವುಡ್ ಚಿತ್ರರಂಗದ ಅನಿಭಿಷಕ್ತ ರಾಣಿಯಾಗಿ ಮೆರೆದಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply