JYOTHISHYA
‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ
ಬೆಂಗಳೂರು, ಮೇ 27: ಕನ್ನಡ ಕಿರುತೆರೆಯ ನಟಿಸಿ ಫೇಸಮ್ ಆಗಿದ್ದ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ.
ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಅವರು ಬೆಡ್ ಮೇಲೆ ಗುರುತೇ ಸಿಗದಷ್ಟು ಬದಲಾಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಅವರನ್ನು ಇಡಲಾಗಿದೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.

ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್ನಲ್ಲಿ ಸುದ್ದಿ ಬಿತ್ತರ ಆಯಿತು. ವಿಚಿತ್ರ ಸೋಂಕಿನಿಂದ ಅವರು ಈ ರೀತಿ ಆಗಿದ್ದರು. ಗುರುತು ಸಿಗದಷ್ಟು ಬದಲಾಗಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿರೋದು ಕಂಡು ಬಂದಿತ್ತು. ಇದನ್ನು ನೋಡಿ ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಆಗಿತ್ತು. ಅವರು ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದರು. ಅನೇಕರು ಹಣದ ಸಹಾಯ ಕೂಡ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗಲಿಲ್ಲ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರು ಕೊನೆ ಉಸಿರು ಎಳೆದಿದ್ದಾರೆ.
‘ನಮ್ಮ ನಡುವಿದ್ದ ಕಲಾವಿದ ಶ್ರೀಧರ ನಾಯಕ್ ಬಹಳ ದಿನಗಳ ಅನಾರೋಗ್ಯದಿಂದ ಮುಕ್ತರಾಗಿ ರಾತ್ರಿ 10 ಗಂಟೆಗೆ ದೇವಸನ್ನಿಧಿ ಸೇರಿದ್ದಾರೆ.ಅವರ ಪಾರ್ಥೀವ ಶರೀರವು ಹೆಬ್ಬಾಳದಲ್ಲಿರುವ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಬೆಳಿಗ್ಗೆ 11 ಘಂಟೆಯವರೆಗೆ (ಮೇ 27) ಅಂತಿಮ ದರ್ಶನದ ವ್ಯವಸ್ಥೆ ಮಾಡಿರುತ್ತಾರೆ’ ಎಂದು ಅವರ ಆಪ್ತರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
1 Comment