Connect with us

FILM

ನಟಿಗೆ ಮನಬಂದಂತೆ ಹಲ್ಲೆ ಮಾಡಿದ ಮಾಜಿ ಪ್ರಿಯಕರ..ಸಾಮಾಜಿಕ ಜಾಲತಾಣದಲ್ಲಿ ಪೋಟೋ ವೈರಲ್

ಬೆಂಗಳೂರು ಮಾರ್ಚ್ 7: ತಮಿಳಿನ ನಟಿಯೊಬ್ಬಳಿಗೆ ಮಾಜಿ ಪ್ರಿಯಕರ ಮನಬಂದಂತೆ ಥಳಿಸಿರುವ ಘಟನೆ ನಡೆದಿದ್ದು, ಪ್ರಿಯಕರನಿಂದ ಹಲ್ಲೆಗೊಳಗಾದ ನಟಿ ಅನಿಕಾ ವಿಜಯ್ ವಿಕ್ರಮನ್ ರಕ್ತಸಿಕ್ತ ಮುಖದ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


ನಟಿ ವಿಜಯ್ ವಿಕ್ರಮನ್ ಮೇಲೆ ಮಾಜಿ ಪ್ರಿಯಕರ ಅನೂಪ್ ಪಿಳ್ಳೈ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಮುಖ, ಕಣ್ಣುಗಳಿಗೆ ಗುದ್ದಿ ಗಾಯಗೊಳಿಸಿದ್ದಾನೆ.

ರಕ್ತಸಿಕ್ತ ಮುಖದ ಫೋಟೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕ್ರೂರ ಪ್ರಿಯಕರನ ಬಗ್ಗೆ ಬರೆದುಕೊಂಡಿದ್ದಾರೆ. ಅನುಭವಿಸಿದ ಯಾತನೆಯನ್ನು ಇಂಚಿಂಚಾಗಿ ಹೇಳಿಕೊಂಡಿದ್ದಾರೆ.


ಸೋಷಿಯಲ್ ಮೀಡಿಯಾದಲ್ಲಿ ಕ್ರೂರವಾಗಿ ಥಳಿಸಿರುವ ಮಾಜಿ ಪ್ರಿಯಕರನ ಬಗ್ಗೆ ಬರೆದುಕೊಂಡಿದ್ದು, ‘ನಾನು ಅವನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದೆವು.  ಅವನು ಹಲವು ತಿಂಗಳಿಂದ ದೈಹಿಕ ಮತ್ತು ಮಾನಸಿಕವಾಗಿ ಸಾಕಷ್ಟು ತೊಂದರೆ ಕೊಡುತ್ತಲೇ ಬಂದ. ಈಗಾಗಲೇ ಎರಡು ಬಾರಿ ಥಳಿಸಿದ್ದಾನೆ. ಜೀವ ಬೆದರಿಕೆ ಹಾಕಿದ್ದಾನೆ.

ನನ್ನ ಜೀವನದಲ್ಲಿ ಇಂಥದ್ದೊಂದು ಘಟನೆ ನಡೆಯುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಪೊಲೀಸರು ಕೂಡ ಅವನಿಗೆ ಸಹಕರಿಸುತ್ತಿದ್ದಾರೆ’ ಎಂದು ಹೇಳಿಕೊಂಡಿದ್ದಾರೆ.

Advertisement
Click to comment

You must be logged in to post a comment Login

Leave a Reply