ಬೆಂಗಳೂರು ಜನವರಿ 15: ಬೆಟ್ಟಿಂಗ್ ದಂಧೆಗೆ ಬಿದ್ದು ಹಣವನ್ನೆಲ್ಲಾ ಕಳೆದುಕೊಂಡು ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ತನ್ನ ತಂಗಿ ಸಮೃದ್ಧಿ ರಾಮ್ ವಿರುದ್ಧ ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾರುಣ್ಯಾ ರಾಮ್ ಸಹೋದರಿ ಸಮೃದ್ಧಿ ರಾಮ್ ಅವರು ಮೇಕಪ್ ಕಲಾವಿದೆ ಆಗಿದ್ದರು, ಬಳಿಕ ಕೆಲವು ಧಾರಾವಾಹಿಗಳಲ್ಲಿ ಸಹ ನಟಿಸಿದರು, ಬಳಿಕ ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದು, ಬೆಟ್ಟಿಂಗ್ನಿಂದಾಗಿ ಸುಮಾರು 25 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.
ಬೆಟ್ಟಿಂಗ್ ಆಡಿ ಕಳೆದುಕೊಂಡ ಹಣ ತುಂಬಲು ಖಾಸಗಿ ವ್ಯಕ್ತಿಗಳಿಂದ ಅಧಿಕ ಬಡ್ಡಿಗೆ ಸಾಲ ಪಡೆದುಕೊಂಡಿದ್ದಾರೆ. ಅಷ್ಟು ಮಾತ್ರವೇ ಅಲ್ಲದೆ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನದ ಒಡವೆಗಳನ್ನು ಸಹ ಬಳಸಿ ಹಣ ಪಡೆದು ಬೆಟ್ಟಿಂಗ್ ಆಡಿ ಹಾಳು ಮಾಡಿದ್ದಾರೆ. ಮನೆಯವರು, ಹಣ ಮತ್ತು ಚಿನ್ನದ ಬಗ್ಗೆ ಪ್ರಶ್ನೆ ಮಾಡಿದಾಗ ಸಮೃದ್ಧಿ ಮನೆ ಬಿಟ್ಟು ಹೋಗಿದ್ದಾರೆ.
ಇದೀಗ ಸಮೃದ್ಧಿಗೆ ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸಹ ಏನೇ ಪೋಸ್ಟ್ ಹಾಕಿದರು ಅಶ್ಲೀಲ ಸಂದೇಶಗಳನ್ನು, ಬೆದರಿಕೆ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂದು ಕಾರುಣ್ಯ ರಾಮ್ ಆರೋಪಿಸಿದ್ದಾರೆ. ಕಾರುಣ್ಯ ಅವರು ಸಹೋದರಿ ಸಮೃದ್ಧಿಯ ಜೊತೆಗೆ ಪ್ರತಿಭಾ, ರಕ್ಷಿತ್, ಪ್ರಜ್ವಲ್, ಸಾಗರ್ ಎಂಬುವರ ವಿರುದ್ಧವೂ ಆರ್ಆರ್ ನಗರ ಪೊಲೀಸರು ಕಾರುಣ್ಯ ರಾಮ್ ನೀಡಿರುವ ದೂರು ದಾಖಲಿಸಿಕೊಂಡಿದ್ದು ವಿಚಾರಣೆ ಆರಂಭಿಸಿದ್ದಾರೆ.