Connect with us

    FILM

    ಹಿರಿಯ ನಟಿ ಹೇಮಾ ಚೌಧುರಿ ಅವರಿಗೆ ಬ್ರೈನ್ ಹ್ಯಾಮರೇಜ್ – ಐಸಿಯುನಲ್ಲಿ ಚಿಕಿತ್ಸೆ

    ಬೆಂಗಳೂರು ಡಿಸೆಂಬರ್ 20: ಹೆಸರಾಂತ ಹಿರಿಯ ನಟಿ ಹೇಮಾ ಚೌಧುರಿ ಅವರಿ ಬ್ರೈನ್ ಹ್ಯಾಮರೆಜ್ ಆಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.


    ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೇಮಾ ಅವರ ಮಗ ಐರ್ಲೆಂಡ್​ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

    ಇತ್ತೀಚೆಗೆ ನಿಧನರಾದ ಹಿರಿಯ ನಟಿ ಲೀಲಾವತಿ ಅವರ ಪುಣ್ಯತಿಥಿ ಮೊನ್ನೆ 18ರಂದು ಅವರ ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ನೆರವೇರಿತ್ತು. ಅದಕ್ಕೆ ಹೇಮಾ ಚೌಧರಿಯವರು ಬಂದಿದ್ದರು. ಅದಾದ ನಂತರ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯ ಉಂಟಾಗಿದೆ

    Share Information
    Advertisement
    Click to comment

    Leave a Reply

    Your email address will not be published. Required fields are marked *