Connect with us

FILM

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತ – ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ – ನಟಿ ಅರೆಸ್ಟ್

ಮುಂಬೈ: ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ ಮಾಡಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲದೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಮೇಲೆ ನಟಿ ಕಾವ್ಯಾ ಥಾಪರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಫೆಬ್ರವರಿ 17ರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಜುಹುದ ಜೆಡಬ್ಲ್ಯೂ ಮ್ಯಾರಿಯಟ್ ಹೋಟೆಲ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿರುವ 26 ವರ್ಷದ ಕಾವ್ಯಾ ಥಾಪರ್​ ಅವರು ಜುಹುದಲ್ಲಿ ಎಸ್‌ಯುವಿ ಕಾರು ಓಡಿಸುತ್ತಿದ್ದರು. ಈ ವೇಳೆ ಕುಡಿದ ಅಮಲಿನಲ್ಲಿದ್ದ ಅವರು ರಸ್ತೆ ಬದಿ ನಿಂತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.


ಇದರಿಂದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಟ್ರಾಫಿಕ್​ ಪೊಲೀಸರು ಕಾವ್ಯಾ ಅವರನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಿಟ್ಟಾದ ಅವರು ಅವಾಚ್ಯ ಪದಗಳಿಂದ ಪೊಲೀಸರನ್ನೇ ನಿಂದಿಸಿ, ಹಲ್ಲೆ ಮಾಡಲು ಮುಂದಾಗಿದ್ದಾರೆ.


ಕಾವ್ಯಾ ಥಾಪರ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply