Connect with us

    LATEST NEWS

    ಖ್ಯಾತ ನಟಿ ರಂಭಾ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ….!!

    ಕೆನಡಾ ನವೆಂಬರ್ 1: ಬಹುಭಾಷಾ ತಾರೆಯಾಗಿ ನಟಿಸಿ ಇದೀಗ ಕೆನಡಾದಲ್ಲಿರುವ ನಟಿ ರಂಭಾ ಅವರು ಸಂಚಲಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದ್ದು, ಈ ಘಟನೆಯಲ್ಲಿ ರಂಭಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಆದರೆ, ಮಗಳಿಗೆ ಮಾತ್ರ ಇನ್ನೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.


    ರಂಭಾ ಮದುವೆ ಬಳಿಕ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊ ದಲ್ಲಿ ನೆಲೆಸಿದ್ದಾರೆ. ಈ ದಂಪತಿಗೆ ಇಬ್ಬರು ಪುತ್ರಿಯರಿದ್ದು, ಓರ್ವ ಪುತ್ರನಿದ್ದಾನೆ. ಟೊರೊಂಟೊದಲ್ಲೇ ಅವರು ಮಕ್ಕಳಿಗೆ ಶಿಕ್ಷಣ ಕೂಡ ಕೊಡಿಸುತ್ತಿದ್ದಾರೆ. ಶಾಲೆ ಮುಗಿಸಿಕೊಂಡು ಮಕ್ಕಳನ್ನು ಕರೆತರುವಾಗ ಕಾರು ಅಪಘಾತಕ್ಕೀಡಾಗಿದೆ. ರಂಭಾ ಚಲಾಯಿಸುತ್ತಿದ್ದ ಕಾರು ಬಲ ಬದಿಯಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ.


    ರಂಭಾ ಚಲಾಯಿಸುತ್ತಿದ್ದ ಕಾರಿನಲ್ಲಿ ಇಬ್ಬರು ಮಕ್ಕಳು ಮತ್ತು ಮಕ್ಕಳನ್ನು ನೋಡಿಕೊಳ್ಳುತ್ತಿರುವ ಕೆಲಸದಾಕೆ ಇದ್ದರು ಎಂದು ಹೇಳಲಾಗುತ್ತಿದ್ದು, ಕಿರಿಯ ಪುತ್ರಿ ಸಾಶಾಗೆ ತೀವ್ರ ಗಾಯಗಳಾಗಿದ್ದು, ಉಳಿದಂತೆ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಈ ಎಲ್ಲ ವಿವರಗಳನ್ನು ಸ್ವತಃ ರಂಭಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply