DAKSHINA KANNADA
ಧರ್ಮಸ್ಥಳ ಪ್ರಕರಣ – ನ್ಯಾಯಯುತ ತನಿಖೆಗೆ ನಟಿ ರಮ್ಯಾ ಆಗ್ರಹ

ಬೆಂಗಳೂರು ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಯುತ ತನಿಖೆಯಾಗಬೇಕೆಂದು ನಟಿ ರಮ್ಯಾ ಆಗ್ರಹಿಸಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ನಟಿ ರಮ್ಯಾ, ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಧರ್ಮಸ್ಥಳ ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚು ಪೂಜಿಸುತ್ತಾರೆ. ಈಗಾಗಿ ನ್ಯಾಯಯುತ ತನಿಖೆ ನಡೆಯುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣದ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್ ರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಶನಿವಾರ ಮನವಿ ಮಾಡಿದ್ದಾರೆ.
ನಮ್ಮ ಸರ್ಕಾರಕ್ಕೆ, ನಾನು ಬೇಡಿಕೊಳ್ಳುತ್ತೇನೆ, ನಿಮ್ಮ ಜನರ ನಿಟ್ಟುಸಿರಿಗೆ ಎದುರಾಗಿ, ಅವರ ಅಳಲನ್ನು ಆಲಿಸಿ. ತನಿಖೆ ನಡೆಸುವುದು, ಸತ್ಯವನ್ನು ಹೊರಹಾಕುವುದು ಮತ್ತು ನ್ಯಾಯವನ್ನು ಖಚಿತಪಡಿಸುವುದು ನಿಮ್ಮ ಪವಿತ್ರ ಕರ್ತವ್ಯ. ಇನ್ನು ವಿಳಂಬ, ನೆಪಗಳು ಬೇಡ ಎಂದು ನಟ ರಾಕೇಶ್ ಅಡಿಗ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.