FILM
ನಟ ದರ್ಶನ ಅಭಿಮಾನಿಗಳಿಗೆ ನಟಿ ರಮ್ಯಾ ವಾರ್ನಿಂಗ್…!!

ಬೆಂಗಳೂರು ಜುಲೈ 27: ನಟ ದರ್ಶನ ಅಭಿಮಾನಿಗಳ ವಿರುಜ್ಜ ನಟಿ ರಮ್ಯಾ ಗರಂ ಆಗಿದ್ದಾರೆ. ಈ ಕುರಿತಂತೆ ಇನ್ಸ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಅಂತಲೂ ಬರೆದುಕೊಂಡಿದ್ದಾರೆ.
ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಅಂತಲೂ ಬರೆದುಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ʻಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ಕಾಮೆಂಟ್ಸ್ ಮಾಡೋದ್ರ ಜೊತೆಗೆ ಟ್ರೋಲ್ ಮಾಡಿದ್ರು. ಇದೀಗ ನಟಿ ರಮ್ಯಾ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

ರೇಣುಕಾ ಸ್ವಾಮಿ ಕೇಸ್ ಮಾತ್ರವಲ್ಲದೇ ಧರ್ಮಸ್ಥಳದ ವಿವಾದದ ಬಗ್ಗೆಯೂ ರಮ್ಯಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಧರ್ಮಸ್ಥಳದಲ್ಲಿ ಆಗಿರುವ ಪ್ರಕರಣಗಳ ಬಗ್ಗೆ ನ್ಯಾಯಯುತವಾದ ತನಿಖೆ ಆಗುತ್ತದೆ ಎಂಬ ಭರವಸೆ ಇದೆ. ನಮಗೆ ಸತ್ಯ ತಿಳಿಯಬೇಕು’ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.