FILM
ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಪಿಕ್ ಪಾಕೆಟ್ – ನಟಿ ಅರೆಸ್ಟ್

ಕೋಲ್ಕತ್ತಾ : ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಪಿಕ್ ಪಾಕೇಟ್ ಮಾಡಿದ ಆರೋಪದ ಮೇಲೆ ನಟಿ ರೂಪಾ ದತ್ತಾ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಾರ್ಚ್ 12 ರಂದು ಈ ಘಟನೆ ನಡೆದಿದ್ದು , ಮಹಿಳೆಯೊಬ್ಬರು ಬ್ಯಾಗ್ ಒಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಗಮನಿಸಿದ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಾಹಿತಿ ಹೊರ ಬಿದ್ದಿದೆ.
ನಟಿಯನ್ನು ಬಂಧಿಸಿದ ನಂತರ ವಿಚಾರಣೆ ವೇಳೆಯಲ್ಲಿ ಆಕೆ ನೀಡಿದ್ದ ಉತ್ತರಗಳು ಸಮರ್ಪಕವಾಗಿರಲಿಲ್ಲ. ಶೋಧನೆ ವೇಳೆ ಆಕೆಯ ಬ್ಯಾಗ್ ನಿಂದ ಅನೇಕ ಪರ್ಸ್ ಗಳು ಮತ್ತು 75 ಸಾವಿರ ರೂ. ನಗದು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಗಮನ ಬೇರೆಡೆ ಸೆಳೆದು ಕಳ್ಳತನ ಆರೋಪದ ಮೇರೆಗೆ ನಟಿಯನ್ನು ಬಂಧಿಸಲಾಗಿದೆ. ಈ ಅಪರಾಧದಲ್ಲಿ ಹೆಚ್ಚಿನ ಜನರು ತೊಡಗಿಸಿಕೊಂಡರಬಹುದೇ ಎಂಬುದನ್ನು ತಿಳಿಯಲು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಅಧಿಕಾರಿ ಹೇಳಿದ್ದಾರೆ. ರೂಪಾ ದತ್ತಾ ಅವರು ಈ ಹಿಂದೆ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ತಪ್ಪಾಗಿ ಲೈಂಗಿಕ ಕಿರುಕುಳ ಆರೋಪ ಮಾಡಿ ಸುದ್ದಿಯಾಗಿದ್ದರು.
