Connect with us

  FILM

  ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರತಂಡ ಸೇರಿಕೊಂಡ ನಟಿ ಸಂಜನಾ ದಾಸ್ – ಹಯವದನ ನಿರ್ದೇಶನದ ಮೊದಲ ಸಿನಿಮಾ

  ಹಯವದನ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಹೊಸ ನಾಯಕ ನಟಿಯನ್ನು ಪರಿಚಯಿಸಿತ್ತು ಇದೀಗ ಮತ್ತೊಬ್ಬ ಪ್ರತಿಭಾನ್ವಿತ ನಟಿ ಸಿನಿಮಾ ತಂಡವನ್ನು ಸೇರಿಕೊಂಡಿದ್ದಾರೆ.

  ಈಗಾಗಲೇ ವೆನ್ಯ ರೈ ಎಂಬ ನವ ಪ್ರತಿಭೆಯನ್ನು ನಾಯಕಿಯಾಗಿ ಪರಿಚಯಿಸಿರುವ ಸಿನಿಮಾ ತಂಡ ಇದೀಗ ಚಿತ್ರಕ್ಕೆ ಮತ್ತೊಬ್ಬ ನಟಿಮಣಿ ಸಂಜನಾ ದಾಸ್ ರನ್ನು ಕರೆ ತಂದಿದೆ. ಕನ್ನಡದಲ್ಲಿ ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂ ನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಅನೇಕ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಹಯವದನ ನಿರ್ದೇಶನದ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ.

  ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ತಂಡ ಮಹಾರಾಷ್ಟ್ರ ದಲ್ಲಿಎರಡನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರದಲ್ಲಿ ‘ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿದ್ದಾರೆ. ತಂದೆ ಮಗನ ಬಾಂದವ್ಯದ ಜೊತೆಗೆ ಪ್ರೇಮ್ ಕಹಾನಿ, ಕಾಮಿಡಿ ಹಾಗೂ ಸೆಂಟಿಮೆಂಟ್ ಎಲಿಮೆಂಟ್ ಗಳನ್ನ ಒಳಗೊಂಡ ಜರ್ನಿ ಸಿನಿಮಾ ಇದಾಗಿದೆ.

  ಚಿತ್ರದಲ್ಲಿ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ಒಳಗೊಂಡ ತಾರಾಬಳಗವಿದೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

  Share Information
  Advertisement
  Click to comment

  You must be logged in to post a comment Login

  Leave a Reply