Connect with us

    FILM

    ನಟಿ ಶೃತಿ, ಭವ್ಯಾ ಅಭಿನಯದ ‘ಕೊರಗಜ್ಜ’ ಸಿನಿಮಾ ಚಿತ್ರೀಕರಣ ಯಶಸ್ವಿ ಮುಕ್ತಾಯ ;ಬುರ್ದುಗೋಳಿಯಲ್ಲಿ ಹರಕೆ ಕೋಲ ತೀರಿಸಿದ ಚಿತ್ರತಂಡ..!

    ಮಂಗಳೂರು : ಕರಾವಳಿಯ ಆರಾಧ್ಯ ದೈವ ಕೊರಗಜ್ಜನ ಕಥೆಯಾಧರಿತ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ಬಜೆಟ್ ಚಿತ್ರ “ಕೊರಗಜ್ಜ” ಸಿನೆಮಾ ಚಿತ್ರೀಕರಣ ಪೂರ್ತಿಗೊಳಿಸಿದೆ.ಈ ಹಿನ್ನೆಲೆಯಲ್ಲಿ ಚಿತ್ರತಂಡ ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿ ಸ್ಥಳದಲ್ಲಿ ಕೋಲ ಸೇವೆ ಕೊಟ್ಟಿತು.

     

    ನಟಿಯರಾದ ಶೃತಿ ಮತ್ತು ಭವ್ಯ ಕೋಲದಲ್ಲಿ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಿರ್ಮಾಪಕ ತ್ರಿವಿಕ್ರಮ ಸಪಲ್ಯ, ಸಹ ನಿರ್ಮಾಪಕ ವಿದ್ಯಾಧರ್ ಶೆಟ್ಟಿ, ನಟಿ ಭವ್ಯ ಪುತ್ರಿ ಅದಿತಿ, ನಟಿ ಶ್ರುತಿ ಮಗಳು ಗೌರಿ, ನಾಯಕ ನಟ ಭರತ್ ಸೂರ್ಯ, ನಾಯಕ ನಟಿ ರಿತಿಕ, ಬಾಲ ನಟರುಗಳಾದ ಸುಧಾ, ನವನೀತ, ಶ್ರೀಹರಿ, ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ನಾಯಕ್, ಉಪಾಧ್ಯಕ್ಷ ದೇವದಾಸ್ ಗಟ್ಟಿ ಕಾಯಂಗಳ, ಬಿಜೆಪಿ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ವಕೀಲ ಗಂಗಾಧರ್ ಉಳ್ಳಾಲ್, ಪುರುಷೋತ್ತಮ್ ಕಲ್ಲಾಪು ಕೋಲದಲ್ಲಿ ಉಪಸ್ಥಿತರಿದ್ದರು.

    ಪ್ಯಾನ್ ಇಂಡಿಯಾ ರೀತಿಯಲ್ಲಿ ಸಿನೆಮಾ ತಯಾರಾಗುತ್ತಿದ್ದು, ಹಿಂದಿ, ತೆಲುಗು, ತಮಿಳು, ಮಲಯಾಳಂ, ಕನ್ನಡ ಹಾಗೂ ತುಳು ಭಾಷೆಯಲ್ಲಿಯೂ ಚಿತ್ರ ತೆರೆಕಾಣಲಿದೆ. ತಾಂತ್ರಿಕವಾಗಿ ಪುಷ್ಪದಂತಹ ದೊಡ್ಡ ಸಿನಿಮಾ ನಿರ್ವಹಿಸಿದ ಬಿಪಿನ್ ದೇವ್ ಸೌಂಡ್ ಡಿಸೈನ್ ಮಾಡುತ್ತಿದ್ದು, ಮಲಯಾಳಂನ ಬಹುದೊಡ್ಡ ಎಡಿಟರ್ ಗೀತ್ ಜೋಷಿ ಎಡಿಟಿಂಗ್ ತಂಡದ ನೇತೃತ್ವ ವಹಿಸಿದ್ದಾರೆ. ಒ.ಬಿ ಸುಂದರ್ ಸಂಗೀತ ನಿರ್ದೇಶನ ಹಾಗೂ ಹಿನ್ನೆಲೆ ಸಂಗೀತವನ್ನು ನೀಡುತ್ತಿದ್ದಾರೆ. ಕೊಚ್ಚಿ, ಮುಂಬೈನಲ್ಲಿ ಪೋಸ್ಟ್ ಪ್ರಾಡಕ್ಷನ್ ನಡೆಯುತ್ತಿದೆ.ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ, ಕನ್ನಡ ಹಾಗೂ ತುಳು ಭಾಷೆಗಳಲ್ಲಿಯೂ ಚಿತ್ರ ತೆರೆಕಾಣಲಿದೆ. ತಾಂತ್ರಿಕವಾಗಿ ‘ಪುಷ್ಪ’ದಂತಹ ದೊಡ್ಡ ಸಿನಿಮಾ ನಿರ್ವಹಿಸಿದ ಬಿಪಿನ್ ದೇವ್ ಸೌಂಡ್ ಡಿಸೈನ್ ಮಾಡುತ್ತಿದ್ದು, ಮಲಯಾಳಂನ ಬಹುದೊಡ್ಡ ಎಡಿಟರ್ ಗೀತ್ ಜೋಷಿ ಎಡಿಟಿಂಗ್ ತಂಡದ ನೇತೃತ್ವ ವಹಿಸಿದ್ದಾರೆ. ಒ.ಬಿ ಸುಂದರ್ ಸಂಗೀತ ನಿರ್ದೇಶನ ಹಾಗೂ ಹಿನ್ನೆಲೆ ಸಂಗೀತವನ್ನು ನೀಡುತ್ತಿದ್ದಾರೆ. ಕೊಚ್ಚಿ, ಮುಂಬೈನಲ್ಲಿ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದೆ. ಭರತ್ ಕೊರಗತನಿಯ ಪಾತ್ರ ನಿರ್ವಹಿಸುತ್ತಿದ್ದು, ಕೃತಿಕಾ ಅನ್ನುವ ಅದ್ಭುತ ಪ್ರತಿಭೆ ಕೊರಗಜ್ಜನ ತಾಯಿ ಕೊರೊಪೊಳು ಪಾತ್ರ ಮಾಡುತ್ತಿದ್ದಾರೆ.
    ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ. ಈ ಬಾರಿಯೂ ದೈವದ ಇಚ್ಛೆಯಂತೆ ಅದೇ ದಿನ ಭೇಟಿ ನೀಡಿದ್ದೇನೆ. ಕೊರಗಜ್ಜನ ಆಶೀರ್ವಾದ ಮತ್ತು ಪವಾಡದಿಂದ ಇದು ಸಾಧ್ಯವಾಗಿದೆ. ಕೊರಗಜ್ಜ ಚಿತ್ರದಲ್ಲಿ ಪಂಜಂದಾಯ ಪಾತ್ರ ನಿರ್ವಹಿಸಿರುವೆ. ಅದ್ಭುತ ಕಲಾವಿದರನ್ನೊಳಗೊಂಡ ಯಶಸ್ಸಿನ ಚಿತ್ರವಾಗಿ ನಮ್ಮ ಸಿನಿಮಾ ಹೊರಹೊಮ್ಮಲಿದೆ. ಕೊರಗಜ್ಜನ ದಯೆಯಿಂದ ಚಿತ್ರದ ಪ್ರತೀ ಕೆಲಸ ಕಾರ್ಯಗಳು ಪವಾಡದ ರೀತಿಯಲ್ಲಿ ನಡೆದು ಬಂದಿದೆ ಎಂದರು. ಇನ್ನು ನಟಿ ಶೃತಿ ಮಾತನಾಡಿ, ಹಣ ಇದ್ದವರು ಸಿನಿಮಾ ಮಾಡಲು ಸಾಧ್ಯವಿಲ್ಲ. ದೇವರ ಅನುಗ್ರಹದಿಂದಷ್ಟೇ ‘ಕೊರಗಜ್ಜ’ ಸಿನಿಮಾ ಮಾಡಿರುವುದು ನಮಗೆ ಸಿಕ್ಕ ಅನುಭವದಿಂದ ಕಂಡುಬಂದ ಸತ್ಯ. ಚಿತ್ರದ ಶೂಟಿಂಗ್ ಉದ್ದಕ್ಕೂ ಒಳ್ಳೆ ವಿಚಾರಗಳೇ ತುಂಬಿರುವುದು ದೈವದ ಅನುಗ್ರಹ. ಈ ಸಿನಿಮಾ ತೆರೆಮರೆಯಲ್ಲಿದ್ದ ಕಲಾವಿದರನ್ನು ಕೂಡ ಸೂಕ್ತವಾಗಿ ತೆಗೆದುಕೊಂಡು ಹೋಯಿತು. ಬಹು ನಿರೀಕ್ಷೆಯಲ್ಲಿರುವ ಸಿನಿಮಾಗಳಲ್ಲಿ ಕೊರಗಜ್ಜನ ಚಿತ್ರವೂ ಸೇರಿದೆ ಎಂದು ತಿಳಿಸಿದರು. ಮಾರ್ಚ್ ಕೊನೆಗೆ ಬಹು ನಿರೀಕ್ಷಿತ ಚಿತ್ರ ತೆರೆಕಾಣಲಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply