Connect with us

FILM

ಹಿರಿಯ ನಟಿ ವಹೀದಾ ರೆಹಮಾನ್‌ಗೆ ಪ್ರತಿಷ್ಟಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗರಿ..!

ಹಿರಿಯ ನಟಿ ವಹೀದಾ ರೆಹಮಾನ್ ಅವರು ಪ್ರತಿಷ್ಟಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹೊಸದಿಲ್ಲಿ : ಹಿರಿಯ ನಟಿ ವಹೀದಾ ರೆಹಮಾನ್ ಅವರು ಪ್ರತಿಷ್ಟಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಈ ಮಾಹಿತಿಯನ್ನು ಮಾದ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ಜೀವಮಾನ ಸಾಧನೆಗೆ ನಟಿ ವಹೀದಾ ರೆಹಮಾನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ವಹೀದಾ ರೆಹಮಾನ್ ರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲು ಸಂತೋಷಪಡುತ್ತೇನೆ.

ವಹೀದಾ ಅವರು ಹಿಂದಿ ಚಲನಚಿತ್ರಗಳಲ್ಲಿನ ಅವರ ಪಾತ್ರಗಳಿಗಾಗಿ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದಿದ್ದಾರೆ,

ಅವುಗಳಲ್ಲಿ ಪ್ಯಾಸಾ, ಕಾಗಜ್ ಕೆ ಫೂಲ್, ಚೌಧವಿ ಕಾ ಚಾಂದ್, ಸಾಹೇಬ್ ಬಿವಿ ಔರ್ ಗುಲಾಮ್, ಗೈಡ್, ಖಾಮೋಶಿ ಮೊದಲಾದವು ಪ್ರಮುಖವಾದವು” ಎಂದು ಅನುರಾಗ್‌ ಠಾಕೂರ್‌ ಟ್ವೀಟ್‌ ಮಾಡಿದ್ದಾರೆ.

ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ವಹೀದಾ ಜಿ ಅವರು ತಮ್ಮ ಕಠಿಣ ಪರಿಶ್ರಮದಿಂದ ಅತ್ಯುನ್ನತ ಮಟ್ಟದ ವೃತ್ತಿಪರ ಶ್ರೇಷ್ಠತೆಯನ್ನು ಸಾಧಿಸಬಲ್ಲ ಭಾರತೀಯ ನಾರಿಯ ಸಮರ್ಪಣೆ, ಬದ್ಧತೆ ಮತ್ತು ಶಕ್ತಿಗ ಉದಾಹರಣೆಯಾಗಿದ್ದಾರೆ ಎಂದು ಹೇಳಿದ್ದಾರೆ.

 

Share Information
Advertisement
Click to comment

You must be logged in to post a comment Login

Leave a Reply