KARNATAKA
ಪಿಎಸ್ಐ ನೇಮಕಾತಿ ಹಗರಣ – ಎಡಿಜಿಪಿ ಅಮೃತ್ ಪಾಲ್ ಸಿಐಡಿ ವಶಕ್ಕೆ
ಬೆಂಗಳೂರು ಜುಲೈ 04: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಇದೀಗ ಮೊದಲ ಬಾರಿಗೆ ಐಪಿಎಸ್ ಶ್ರೇಣಿಯ ಅಧಿಕಾರಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ವಿಚಾರಣೆಗೆ ಆಗಮಿಸಿದ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪಿಎಸ್ಐ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಅಮ್ರಿತ್ ಪೌಲ್ ಅವರಿಗೆ ನಾಲ್ಕನೇ ಬಾರಿ ನೋಟಿಸ್ ನೀಡಲಾಗಿತ್ತು. 545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಅವರಿಗೆ ದೂರುಗಳು ಬಂದಿದ್ದವು. ಆದರೆ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿತ್ತು. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾಯಿಸಲಾಗಿತ್ತು.
ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಡಿಜಿಪಿ ಆಗಿರುವ ಅಮ್ರಿತ್ ಪೌಲ್, ಈ ಹಿಂದೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. 545 ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದಡಿ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು’