Connect with us

LATEST NEWS

ಪ್ರವೀಣ್ ಹತ್ಯೆ ಪ್ರಕರಣ – 6 ತಂಡಗಳಲ್ಲಿ ತನಿಖೆ – ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ 6 ತಂಡಗಳನ್ನು ರಚಿಸಲಾಗಿದ್ದು, ಈವರೆಗೆ 15ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಗೃಹಸಚಿವರು ನೆನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ, ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತನಿಖೆ ಮಾಡುತ್ತಿದ್ದಾರೆ. ಪ್ರವೀಣ್ ಹತ್ಯೆಯ ಕುರಿತಂತೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯಪಡೆದು ಆರು ತಂಡಗಳನ್ನು ರಚನೆ ಮಾಡಿದ್ದೇವೆ. ಮತ್ತು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದರು.
ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು. ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದಾರೆ ಪರಿಸ್ಥಿತಿ ಹತೋಟಿಯಲ್ಲಿದೆ. ಜನ ಯಾರು ಗುಂಪು ಕಟ್ಟಿ ಓಡಾಡಬಾರದು


ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಅವಕಾಶ ಕೊಡಬೇಕು. ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆರೋಪಿಗಳನ್ನು ದಸ್ತಗಿರಿ ಮಾಡಿದಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *