LATEST NEWS
ದೀಪಕ್ ರಾವ್ ಹತ್ಯೆ ಪ್ರಕರಣ – ಪೊಲೀಸರ ಕ್ಷಿಪ್ರಗತಿಯ ತನಿಖೆಗೆ ADGP ಕಮಲ್ ಪಂತ್ ಪ್ರಶಂಸೆ

ದೀಪಕ್ ರಾವ್ ಹತ್ಯೆ ಪ್ರಕರಣ – ಪೊಲೀಸರ ಕ್ಷಿಪ್ರಗತಿಯ ತನಿಖೆಗೆ ADGP ಕಮಲ್ ಪಂತ್ ಪ್ರಶಂಸೆ
ಮಂಗಳೂರು ಜನವರಿ 4: ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸರ ಕ್ಷಿಪ್ರ ಗತಿಯ ತನಿಖೆಗೆ ADGP ಕಮಲ್ ಪಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊಲೆ ನಡೆದ ಕೇವಲ 5 ಗಂಟೆಯ ಒಳಗಾಗಿ ಆರೋಪಿಗಳ ಬಂಧನ ಮಾಡಲಾಗಿದ್ದು ಈ ಹಿನ್ನಲೆಯಲ್ಲಿ ಪೊಲೀಸರಿಗೆ ADGP ಕಮಲ್ ಪಂತ್ ಬಹುಮಾನ ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಡಿಜಿಪಿ ಕಮಲ್ ಪಂತ್, ನಿನ್ನೆ ಕಾಟಿಪಳ್ಳ ದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಪ್ರಕರಣದ ಆರೋಪಿಗಳನ್ನು ಹಿಡಿಯುವಲ್ಲಿ ಪೊಲೀಸರು ಕ್ಷಿಪ್ರ ಗತಿಯ ತನಿಖೆಯನ್ನು ನಡೆಸಿದ್ದಾರೆ ಎಂದು ಹೇಳಿದರು, ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಪೊಲೀಸರು ಆರೋಪಿಗಳನ್ನು ಹಿಡಿದಿದ್ದಾರೆ ಎಂದು ಹೇಳಿದರು. ಪೊಲೀಸರ ಶ್ರಮದಿಂದ ಆರೋಪಿಗಳ ಬಂಧನ ಸಾಧ್ಯವಾಗಿದೆ ಎಂದು ತಿಳಿಸಿದರು. ದೀಪಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ಬಂಧನವಾಗಿದ್ದು ಬಂಧಿತರ ತನಿಖೆ ನಡೆಯುತ್ತಿದ್ದು , ಎಲ್ಲಾ ಸತ್ಯಾಸತ್ಯತೆಗಳನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದರು.

ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದ ನಾಲ್ವರು ಪೊಲೀಸರಿಗೆ ತಲಾ 20 ಸಾವಿರ ರೂಪಾಯಿ ಬಹುಮಾನ ಎಡಿಜಿಪಿ ಕಮಲ್ ಪಂಥ್ ಅವರು ಈ ಸಂದರ್ಭದಲ್ಲಿ ನೀಡಿದರು.
ಕಾಟಿಪಳ್ಳ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನವಾಗಿದೆ ಎಂದು ಮಂಗಳೂರು ಕಮೀಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳ ಬಂಧನ ಸಂದರ್ಭದಲ್ಲಿ ಇಬ್ಬರು ಆರೋಪಿಗಳಿಗೆ ಗಾಯವಾಗಿದೆ ಎಂದು ಹೇಳಿದರು. ಆರೋಪಿಗಳಾದ ಪಿಂಕಿ ನವಾಜ್ ಮತ್ತು ನೌಷದ್ ಗೆ ಗಾಯವಾಗದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ತಿಳಿಸಿದರು. ಬಂಟಿಂಗ್ಸ್ ವಿಚಾರದಲ್ಲಿ ನಡೆದ ಜಗಳ ಕೊಲೆಗೆ ಪ್ರಮುಖ ಕಾರಣ ಎಂಬ ಮಾಹಿತಿ ಇದೆ ಎಂದು ಹೇಳಿದರು. ತನಿಖೆಯ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ ಎಂದು ತಿಳಿಸಿದರು.