Connect with us

    FILM

    ಕೊಡಗಿನ ಸೊಸೆಯಾಗಲಿರುವ ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ

    ಮಡಿಕೇರಿ : ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ ವಿವಾಹದ ನಿಶ್ಚಿತಾರ್ಥವಾಗಿದ್ದು, ಕೊಡಗಿನ ಮೂಲದ ಬೆಂಗಳೂರಿನ ಉದ್ಯಮಿಯೊಬ್ಬರನ್ನು ವರಿಸಲಿದ್ದಾರೆ. ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದೆ.


    ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ. ಯಶಸ್ವಿ ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು, ಕೃಷಿ ಕ್ಷೇತ್ರದ ಕಡೆಗೂ ಒಲವು ಹೊಂದಿದ್ದಾರೆ.

    ಗ್ರಾಮೀಣ ಭಾಗದ ಸೊಗಡಿನ ಬಗ್ಗೆ ಅತೀವ ಅಭಿಮಾನ ಹೊಂದಿರುವ ಮತ್ತು ಕೃಷಿಕ ಕುಟುಂಬದ ಬಗ್ಗೆ ಆಸಕ್ತಿಯಿದ್ದ ಅದಿತಿ ತಮ್ಮ ನಿರೀಕ್ಷೆಯ ಹುಡುಗನೊಂದಿಗೆ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.

    ಈಗಾಗಲೇ ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು, ಅದಿತಿ ಹಾಗೂ ಯಶಸ್ವಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply