Connect with us

  LATEST NEWS

  ಆದಾಯ ತೆರಿಗೆ ಇಲಾಖೆಯ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನ್ಯಾಯವಾದಿ ಹರ್ಷ ಕುಮಾರ್‌ ನೇಮಕ

  ಮಂಗಳೂರು, ಜುಲೈ 10: ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್‌ ಅವರು ನೇಮಕವಾಗಿದ್ದಾರೆ.

  ಭಾರತದ ಮಾನ್ಯ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರ ಸೂಚನೆಯ ಮೇರೆಗೆ ಭಾರತ ಸರ್ಕಾರ ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು ಹರ್ಷ ಕುಮಾರ್ ಅವರನ್ನು ಈ ಹುದ್ದೆಗೆ ನೇಮಕ ಮಾಡಿದೆ.

  ಆದಾಯ ತೆರಿಗೆ ಇಲಾಖೆಯ ಮಂಗಳೂರು ವಿಭಾಗದ ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ಪ್ರಕರಣಗಳಲ್ಲಿ ಹರ್ಷ ಕುಮಾರ್ ಅವರು ಆದಾಯ ತೆರಿಗೆ ಇಲಾಖೆಯನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರತಿನಿಧಿಸಲಿದ್ದಾರೆ.

  ಮೂಲತಃ ಬೆಳ್ತಂಗಡಿಯ ಪಡಂಗಡಿಯ ನಡಿಬೆಟ್ಟು ಮನೆತನದವರಾದ ಹರ್ಷ ಕುಮಾರ್ ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹರ್ಷ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ

  Share Information
  Advertisement
  Click to comment

  You must be logged in to post a comment Login

  Leave a Reply