Connect with us

  LATEST NEWS

  ಅಡ್ಯಾರ್ – ಡಿವೈಡರ್ ಗೆ ಬೈಕ್ ಡಿಕ್ಕಿ – ವಿಧ್ಯಾರ್ಥಿ ಮಹಮ್ಮದ್ ನಶತ್ ಸಾವು….!!

  ಮಂಗಳೂರು ಜುಲೈ19: ಬೈಕ್ ಒಂದು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸಹ್ಯಾದ್ರಿ ಕಾಲೇಜಿನ ಮುಂಭಾಗ ನಡೆದಿದೆ.


  ಮೃತರನ್ನು ನಗರದ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21 ) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 11.40ರ ಸುಮಾರಿಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಘಟನೆ ಸಂಭವಿಸಿದೆ. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಕಾಲೇಜಿಗೆ‌ ಹೋಗುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply