ಬೆಂಗಳೂರು ಎರ್ ಶೋದಲ್ಲಿ ಬೆಂಕಿ ಅವಘಡ ಹೊತ್ತಿ ಉರಿದ 300ಕ್ಕೂ ಹೆಚ್ಚು ಕಾರು

ಬೆಂಗಳೂರು ಫೆಬ್ರವರಿ 23: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಎರ್ ಶೋ ದಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ಎರ್ ಪೋರ್ಸ್ ರಸ್ತೆ ಗೇಟ್ ನಂಬರ್ ಕಾಣಿಸಿಕೊಂಡ ಬೆಂಕಿ ಸುಮಾರು 300ಕ್ಕೂ ಹೆಚ್ಚು ವಾಹನಗಳನ್ನು ಆಹುತಿ ತೆಗೆದುಕೊಂಡಿದ್ದು, ಸದ್ಯಕ್ಕೆ ಎರ್ ಶೋ ನ್ನು ಸ್ಥಗಿತಗೊಳಿಸಲಾಗಿದೆ.

‘ಏರೋ ಇಂಡಿಯಾ’ದ ಡೊಮೆಸ್ಟಿಕ್ ಪಾರ್ಕಿಂಗ್ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ 11.30 ಗಂಟೆ ಸುಮಾರಿಗೆ ಕಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿತ್ತು, ಕಾರಿನ ಎಂಜಿನ್ ನಲ್ಲಿ ಶಾರ್ಟ್ ಸರ್ಕೀಟ್ ಉಂಟಾಗಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಒಂದು ಕಾರಿಗೆ ಹೊತ್ತಿಕೊಂಡ ಬೆಂಕಿ, ಪಕ್ಕದ ಮೂರು ಕಾರುಗಳಿಗೂ ವ್ಯಾಪಿಸಿತು. 300ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿದೆ. 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.

ಫೆಬ್ರವರಿ 20 ರಿಂದ ನಡೆಯುತ್ತಿರುವ ವೈಮಾನಿಕ‌ ಪ್ರದರ್ಶನದಲ್ಲಿ ಶನಿವಾರ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ವಾರಾಂತ್ಯದ ದಿನವಾದ ಕಾರಣ ಹೆಚ್ಚಿ‌ನ ಜನ ಏರ್ ಶೋ ನಲ್ಲಿ ಪಾಲ್ಗೊಂಡಿದ್ದಾರೆ.

‘ಪಾರ್ಕಿಂಗ್ ಪ್ರದೇಶದಲ್ಲಿ ಯಾರೂ ಇರಲಿಲ್ಲ. ಹೊಗೆ ಕಾಣಿಸಿಕೊಂಡ ಐದೇ ನಿಮಿಷದಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದರು. ಹೀಗಾಗಿ, ಹೆಚ್ಚಿನ‌ ಹಾನಿ‌ ಸಂಭವಿಸಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದರು.

ಅಗ್ನಿ ಅನಾಹುತ ಸಂಭವಿಸಿದ್ದರಿಂದ ಕೆಲ ಹೊತ್ತು ವೈಮಾನಿಕ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ. ವಾಯುಪಡೆ ಅಧಿಕಾರಿಗಳು ಚರ್ಚೆ ನಡೆಸಿದ ನಂತರವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ.

VIDEO