Connect with us

BELTHANGADI

ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಬೆಳ್ತಂಗಡಿ ಮೂಲದ ಯುವತಿ ಆಕಾಂಕ್ಷ

ಬೆಳ್ತಂಗಡಿ ಮೇ 18: ಎರೋಸ್ಪೇಸ್ ಉದ್ಯೋಗಿಯಾಗಿರುವ ಬೆಳ್ತಂಗಡಿ ಮೂಲದ ಯುವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಘಟನೆ ಮೇ 17 ರಂದು ನಡೆದಿದೆ.


ಮೃತರನ್ನು ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ  ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ಎಂದು ಗುರುತಿಸಲಾಗಿದೆ. ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ದಿಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು, ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು.

ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಪೋನ್ ನಲ್ಲಿ ಮಾತನಾಡಿದ್ದರೆಂದು ಹೇಳಲಾಗಿದ್ದು,  ಬಳಿಕ ಈಕೆ‌ ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿಗಳು ಕುಟುಂಬದವರು ಪಂಜಾಬ್ ತಲುಪಿದ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *