Connect with us

    LATEST NEWS

    ಅಫ್ಘಾನಿಸ್ತಾನ – ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟಕ್ಕೆ 50ಕ್ಕೂ ಅಧಿಕ ಸಾವು

    ಕಾಬೂಲ್ ಅಕ್ಟೋಬರ್ 08: ತಾಲಿಬಾನ್ ಗಳು ಅಪ್ಘಾನಿಸ್ತಾನದ ಅಧಿಕಾರ ವಹಿಸಿಕೊಂಡ ನಂತರವೂ ಬಾಂಬ್ ಬ್ಲಾಸ್ಟ್ ಗಳು ಮುಂದುವರೆದಿದ್ದು, ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 50 ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ.


    ಕುಂದುಜ್ ಪ್ರದೇಶದಲ್ಲಿ ಶಿಯಾ ಮುಸ್ಲಿಂರ ಪ್ರಾರ್ಥನಾ ಮಂದಿರದಲ್ಲಿ ಈ ಬಾಂಬ್ ಬ್ಲಾಸ್ಟ್ ಆಗಿದೆ. ಪ್ರಾರ್ಥನೆ ಸಂದರ್ಭದಲ್ಲಿ ಬಾಂಬ್ ಸ್ಪೋಟಗೊಂಡ ಪರಿಣಾದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಮ್ಮ ಶಿಯಾ ದೇಶವಾಸಿಗಳ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದರು.


    ದಾಳಿಯ ಹೊಣೆಗಾರಿಕೆಯನ್ನು ಇಲ್ಲಿಯವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ತಾಲಿಬಾನ್‌ನ ಕಡು ಪ್ರತಿಸ್ಪರ್ಧಿಗಳಾದ ಇಸ್ಲಾಮಿಕ್ ಸ್ಟೇಟ್ ಗುಂಪು ದಾಳಿ ಮಾಡಿರುವ ಸಾಧ್ಯತೆ ಇದೆ.

    Share Information
    Advertisement
    Click to comment

    You must be logged in to post a comment Login

    Leave a Reply