Connect with us

    LATEST NEWS

    ನವದೆಹಲಿ – ಇಸ್ರೇಲ್ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಪೋಟ…!!

    ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ ವೇಳೆಗೆ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐದರಿಂದ ಆರು ವಾಹನಗಳು ಜಖಂಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


    ದೆಹಲಿಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರಸ್ತೆಯ ಸಮೀಪದಲ್ಲಿರುವ ರಾಯಭಾರ ಕಚೇರಿಯ ಸುತ್ತಮುತ್ತ ನಿಲ್ಲಿಸಿದ್ದ ಹಲವಾರು ಕಾರುಗಳ ವಿಂಡ್‌ಸ್ಕ್ರೀನ್‌ಗಳು ಹಾನಿಗೊಳಗಾದವು. ಇಸ್ರೇಲ್ ರಾಯಭಾರ ಕಚೇರಿಯಿಂದ ಕೇವಲ 50 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದ್ದು, ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.


    ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.  “ನಾವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಅನೇಕ ಪೊಲೀಸ್ ತಂಡಗಳನ್ನು ಸ್ಥಳಕ್ಕೆ ಕರೆಯಿಸಿಕೊಳ್ಳಲಾಗಿದೆ. ಯಾವ ರೀತಿಯ ವಸ್ತುಗಳು ಸ್ಫೋಟಗೊಂಡಿವೆ ಎಂದು ಇನ್ನೂ ಪತ್ತೆಯಾಗಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *