Connect with us

    LATEST NEWS

    ಎಪ್ರಿಲ್ 6 ರಿಂದ ನಾಲ್ಕು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಸಾಧ್ಯತೆ..!!

    ಮಂಗಳೂರು ಎಪ್ರಿಲ್ 6: ಬಿಸಿಲಿನಿಂದ ಕಂಗೆಟ್ಟಿರುವ ಜನರಿಗೆ ಮಳೆರಾಯ ಕರುಣೆ ತೋರುವ ಸಾಧ್ಯತೆ ಇದ್ದು, ಏಪ್ರಿಲ್‌ 6ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಹೇಳಿದೆ.


    ಹವಮಾನ ಇಲಾಖೆ ಪ್ರಕಾರ ಏಪ್ರಿಲ್‌ 6ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಏಪ್ರಿಲ್‌ 7ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆಯಾಗಲಿದೆ.

    ಏಪ್ರಿಲ್‌ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆ ಬೀಳುವ ನಿರೀಕ್ಷೆ ಇದ್ದು, ಏಪ್ರಿಲ್‌ 9 ಮತ್ತು 10ರಂದು ದ.ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply