Connect with us

    LATEST NEWS

    ಬೆಂಗಳೂರು ಬಳಿಕ ಶಿವಮೊಗ್ಗದಲ್ಲೂ ಈ ಬಾರಿ ಕಂಬಳ ಆಯೋಜನೆ – ಅಕ್ಟೋಬರ್ 26 ರಿಂದ ಕಂಬಳ ಋತು ಪ್ರಾರಂಭ

    ಮೂಡುಬಿದಿರೆ, ಅಗಸ್ಟ್ 11: ಬೆಂಗಳೂರು ಬಳಿಕ ಇದೀಗ ಮಲೆನಾಡಿಗೂ ಕರಾವಳಿಯ ಕಂಬಳ ಕಾಲಿಡಲಿದ್ದು, ಈ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜನೆ ಮಾಡಲು ದ.ಕ. ಸೇರಿದ ಜಿಲ್ಲಾ ಕಂಬಳ ಸಮಿತಿ ಶನಿವಾರ ಮೂಡುಬಿದಿರೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದೆ.


    ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ, ಬೆಂಗಳೂರಿನಲ್ಲಿ ಮೊದಲ ಕಂಬಳ ಅಕ್ಟೋಬರ್ 26ರಂದು ನಡೆಯಲಿದೆ. ಕೊನೆಯ ಕಂಬಳವನ್ನು 2025ರ ಎಪ್ರಿಲ್ 19ರಂದು ಶಿವಮೊಗ್ಗದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಈ ಬಾರಿ ಕಂಬಳ ಋತುವಿನಲ್ಲಿ ಒಟ್ಟು 26 ಕಂಬಳಗಳನ್ನು ನಡೆಸಲಾಗುವುದು, ಮಂಗಳೂರಿನ ಪಿಲಿಕುಳ ಕಂಬಳಕ್ಕೆ ಮತ್ತೆ ಚಾಲನೆ ನೀಡಲಾಗುವುದು’ ಎಂದರು.

    ಪಿಲಿಕುಳ ಕಂಬಳದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಆ ಕಂಬಳದ ಸಂದರ್ಭದಲ್ಲಿ ನಾಲ್ಕು ದಿನ ‘ತುಳುನಾಡ ವೈಭವ’ ಕಾರ್ಯಕ್ರಮ ನಡೆಯಲಿದೆ. ಕಂಬಳಕ್ಕೆ ಸಂಬಂಧಿಸಿದ ವಸ್ತುಪ್ರದರ್ಶನ ಏರ್ಪಡಿಸಲಾಗುವುದು ಎಂದ ಅವರು ಪಿಲಿಕುಳದಲ್ಲಿ ಕಂಬಳ ಭವನ ನಿರ್ಮಿಸುವ ಯೋಜನೆ ಇದೆ, ಜಿಲ್ಲೆಯಲ್ಲಿ ನಡೆಯುವ 24 ಕಂಬಳಗಳಿಗೆ ತಲಾ ₹ 5 ಲಕ್ಷ ಅನುದಾನ ನೀಡುವಂತೆ ಸರ್ಕಾರವನ್ನು ಕೋರಲಾಗಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ, ಉಪಾಧ್ಯಕ್ಷರಾದ ನವೀನಚಂದ್ರ ಆಳ್ವ, ಶ್ರೀಕಾಂತ ಭಟ್, ಸಂದೀಪ ಶೆಟ್ಟಿ, ಪ್ರಶಾಂತ ಕಾಜವ, ರಶ್ಮಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು, ಕೋಶಾಧಿಕಾರಿ ಚಂದ್ರಹಾಸ ಸನಿಲ್, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್ ಕಂಗಿನಮನೆ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply