FILM
ಡ್ರಗ್ಸ್ ಸೇವನೆ ಒಪ್ಪಿಕೊಂಡ ಕಾಮಿಡಿಯನ್ ಭಾರತಿ ಸಿಂಗ್ – ಗಂಡ ಹೆಂಡತಿ ಇಬ್ಬರನ್ನು ವಶಕ್ಕೆ ಪಡೆದ ಎನ್ ಸಿಬಿ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನಿಂದ ಬಂಧನಕ್ಕೊಳಗಾಗಿರುವ ಖ್ಯಾತ ಹಾಸ್ಯ ಕಲಾವಿದೆ, ನಿರೂಪಕಿ ಭಾರತಿ ಸಿಂಗ್ ಮತ್ತು ಪತಿ ಹರ್ಷ ಲಿಂಬಾಚಿಯಾ ಡ್ರಗ್ಸ್ ಸೇವನೆ ಮಾಡುತ್ತಿರೋದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.
ಭಾರತಿ ಸಿಂಗ್ ಮನೆಗೆ ನಿನ್ನೆ ದಾಳಿ ನಡೆಸಿದ್ದ ಎನ್‌ಸಿಬಿ ಅಧಿಕಾರಿಗಳು 86.5 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಭಾರತಿ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ತಾವು ಡ್ರಗ್ ಸೇವಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದು, ಬಳಿಕ ಭಾರತಿ ಅವರನ್ನು ಶನಿವಾರ ಬಂಧಿಸಲಾಗಿದ್ದು ಇಂದು ಹರ್ಚ್ ಲಿಂಬಾಚಿಯರನ್ನು ಬಂಧಿಸಿದ್ದಾರೆ.

ಶನಿವಾರ ಬೆಳಗ್ಗೆ ಭಾರತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿತಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಹಿನ್ನೆಲೆ ವಿಚಾರಣೆಗಾಗಿ ದಂಪತಿಯನ್ನ ಎನ್‍ಸಿಬಿ ಕಚೇರಿಗೆ ಕರೆತರಲಾಗಿತ್ತು. 15 ಗಂಟೆ ವಿಚಾರಣೆ ನಡೆಸಿದ ಬಳಿಕ ರಾತ್ರಿ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿತ್ತು. ಇಂದು ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ತಮ್ಮ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.
ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ 21 ವರ್ಷದ ಯುವಕನ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಲಾಗಿತ್ತು. ಯುವಕನಿಂದ 40 ಗ್ರಾಂ ಗಾಂಜಾ ಮತ್ತು ಇನ್ನಿತರ ನಶೆ ಪದಾರ್ಥಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದೇ ಯುವಕ ವಿಚಾರಣೆ ವೇಳೆ ಭಾರತಿ ಸಿಂಗ್ ಹೆಸರು ಹೇಳಿದ್ದ. ಯುವಕನ ಹೇಳಿಕೆಯನ್ನಾಧರಿಸಿ ಅಧಿಕಾರಿಗಳು ಭಾರತಿ ನಿವಾಸದ ಮೇಲೆ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ.