LATEST NEWS
ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಕಾರಣವಾದ ಭಾರತದ 4 ಕೆಮ್ಮು ಸಿರಪ್…!!
ನನದೆಹಲಿ ಅಕ್ಟೋಬರ್ 06: ಭಾರತದ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ನಾಲ್ಕು ಕೆಮ್ಮು ಮತ್ತು ಶೀತ ಸಿರಪ್‌ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಎಚ್ಚರಿಕೆ ನೀಡಿದ್ದು, ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಅವು ಸಂಬಂಧಿಸಿರಬಹುದು ಎಂದು ಎಚ್ಚರಿಸಿದೆ.
ನಾಲ್ಕು ಉತ್ಪನ್ನಗಳ ಪ್ರತಿ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯು ಅವುಗಳು ಸ್ವೀಕಾರಾರ್ಹವಲ್ಲದ ಪ್ರಮಾಣದ ಡೈಥಿಲೀನ್ ಗ್ಲೈಕಾಲ್ ಮತ್ತು ಎಥಿಲೀನ್ ಗ್ಲೈಕಾಲ್ ಅನ್ನು ಮಾಲಿನ್ಯಕಾರಕಗಳಾಗಿ ಒಳಗೊಂಡಿವೆ ಎಂದು ಖಚಿತಪಡಿಸುತ್ತದೆ ಎಂದು ಡಬ್ಲ್ಯುಎಚ್‌ಒ ವೈದ್ಯಕೀಯ ಉತ್ಪನ್ನ ಎಚ್ಚರಿಕೆಯಲ್ಲಿ ತಿಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉನ್ನತ ಮೂಲಗಳ ಪ್ರಕಾರ WHO ಸೆಪ್ಟೆಂಬರ್ 29 ರಂದು ಕೆಮ್ಮು ಸಿರಪ್‌ಗಳ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಗೆ ಎಚ್ಚರಿಕೆ ನೀಡಿದೆ. ಕೇಂದ್ರ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತಕ್ಷಣವೇ ಈ ವಿಷಯವನ್ನು ಹರಿಯಾಣ ನಿಯಂತ್ರಣ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ ತನಿಖೆ ಆರಂಭಿಸಿದೆ.
ಈ ಕೆಮ್ಮು ಸಿರಪ್‌ಗಳನ್ನು ಹರಿಯಾಣದ ಸೋನೆಪತ್‌ನಲ್ಲಿರುವ M/s ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ತಯಾರಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಹಂತದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಸಂಸ್ಥೆಯು ಈ ಉತ್ಪನ್ನಗಳನ್ನು ಗ್ಯಾಂಬಿಯಾಕ್ಕೆ ಮಾತ್ರ ರಫ್ತು ಮಾಡಿದೆ ಎಂದು ತೋರುತಿದ್ದು. ಆರೋಪಗಳಿಗೆ ಕಂಪನಿಯು ಇನ್ನೂ ಪ್ರತಿಕ್ರಿಯಿಸಿಲ್ಲ. WHO ಮುಖ್ಯಸ್ಥ ಟೆಡ್ರೊಸ್ ಸುದ್ದಿಗಾರರಿಗೆ ನೀಡಿರುವ ಮಾಹಿತಿ ಪ್ರಕಾರ ಈ ನಾಲ್ಕು ಶೀತ ಮತ್ತು ಕೆಮ್ಮು ಸಿರಪ್‌ಗಳಿಂದಾಗಿ ಮಕ್ಕಳಲ್ಲಿ ತೀವ್ರವಾದ ಮೂತ್ರಪಿಂಡದ ತೊಂದರೆ ಉಂಟಾಗಿದ್ದು, ಇಗು 66 ಮಕ್ಕಳ ಸಾವಿಗೆ ಕಾರಣವಾಗಿರಬಹುದು ಎಂದಿದ್ದಾರೆ.