DAKSHINA KANNADA
ಮಂಗಳೂರು ಸಿಟಿ ಬಸ್ ನಿರ್ವಾಹಕ ಸಾವಿನ ಬಳಿಕ ಎಚ್ಚೆತ್ತ ಬಸ್ ಮಾಲಕರರಿಂದ ಜಾಗೃತಿ ಅಭಿಯಾನ..!

ಕೆಲ ದಿನಗಳ ಹಿಂದೆ ಮಂಗಳೂರು ನಗರದಲ್ಲಿ ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ದಾರುಣವಾಗಿ ಮೃತಪಟ್ಟ ಬಳಿಕ ಎಚ್ಚೆತ್ತ ಬಸ್ ಮಾಲಕರು ಮತ್ತು ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿ ಕೊಂಡಿದ್ದಾರೆ.
ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರು ನಗರದಲ್ಲಿ ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ದಾರುಣವಾಗಿ ಮೃತಪಟ್ಟ ಬಳಿಕ ಎಚ್ಚೆತ್ತ ಬಸ್ ಮಾಲಕರು ಮತ್ತು ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿ ಕೊಂಡಿದ್ದಾರೆ.

ಇಂದು ಬೆಳಗ್ಗೆ ಮಂಗಳೂರು ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಸುರಕ್ಷ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಾಗೃತಿ ಮೂಡಿಸಿದರು.
ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಹಕರಿಗೆ ನೀಡಿ ಗಂಭೀರತೆಯನ್ನು ಮನವರಿಕೆ ಮಾಡಲಾಯಿತು.
ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ,
ಪ್ರತಿಯೊಬ್ಬ ಪ್ರಯಾಣಿಕನಿಗೂ ನಿರ್ವಾಹಕ ಟಿಕೆಟ್ ನೀಡಬೇಕು ಜೊತೆಗೆ ಚಲೋ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ ತಿರಸ್ಕರಿಸುವಂತಿಲ್ಲ,
ಪ್ರಯಾಣಿಕರೊಂದಿಗೆ ಬಸ್ ಸಿಬಂದಿಗಳು ಸೌಜನ್ಯದಿಂದ ವರ್ತಿಸಬೇಕು,
ಕರ್ಕಶ ಹಾರ್ನ್, ಮ್ಯೂಸಿಕ್ ಸಿಸ್ಟಂ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ನೀಡಿ .
ಗಂಭೀರತೆಯನ್ನು ಮನವರಿಕೆ ಮಾಡಲಾಯಿತು.