Connect with us

DAKSHINA KANNADA

ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಿಢೀರ್‌ ವರ್ಗಾವಣೆ..!

ಮಂಗಳೂರು : ಮಂಗಳೂರು  ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್‌ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ.


ಶಾಲೆಯ ವಿವಾದದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಹಾಗೂ ಡಿಡಿಪಿಐ ವರ್ತನೆ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಆದರೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್‌. ಲೋಬೊ ಕೂಡ ಅಧಿಕಾರಿಗಳ ವರ್ತನೆಯನ್ನು ಖಂಡಿಸಿದ್ದರು. ಇದರ ಬೆನ್ನಲ್ಲೇ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ದಕ್ಷಿಣ ಕನ್ನಡ ಡಿಡಿಪಿಐ ಆಗಿ ನೇಮಕ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *