LATEST NEWS
ವಯಸ್ಸಿನ ದಾಖಲೆ ಇದ್ದರೆ ಮಾತ್ರ ಶಬರಿಮಲೆಗೆ ಸ್ತ್ರೀಯರ ಪ್ರವೇಶ

ವಯಸ್ಸಿನ ದಾಖಲೆ ಇದ್ದರೆ ಮಾತ್ರ ಶಬರಿಮಲೆಗೆ ಸ್ತ್ರೀಯರ ಪ್ರವೇಶ
ಕೇರಳ ಜನವರಿ 5: ಇನ್ನು ಮುಂದೆ ಶಬರಿಮಲೆ ದರ್ಶನಕ್ಕೆ ತೆರಳುವ ಮಹಿಳೆಯರು ವಯಸ್ಸಿನ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ. 10-50 ವರ್ಷದ ಮಹಿಳೆಯರು ಶಬರಿಮಲೆ ದೇವಾಲಯ ಪ್ರವೇಶಿಸುವುದಕ್ಕೆ ನಿರ್ಬಂಧವಿದ್ದು, ದೇವಾಲಯವನ್ನು ನಿರ್ವಹಣೆ ಮಾಡುತ್ತಿರುವ ತಿರುವಂಕೂರು ದೇವಸ್ವಂ ಮಂಡಳಿ ಈಗ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮಹಿಳೆಯರು ವಯಸ್ಸಿನ ದೃಢೀಕರಣ ಪತ್ರ ನೀಡುವುದನ್ನು ಕಡ್ದಾಯಗೊಳಿಸಿದೆ.
ದೇವಸ್ವಂ ಬೋರ್ಡ್ ಅಧ್ಯಕ್ಷ ಎ. ಪದ್ಮಕುಮಾರ್ ಆಧಾರ್ ಕಾರ್ಡ್ ಮುಂತಾದ ಅಧಿಕೃತ ಪ್ರಮಾಣ ಪತ್ರಗಳನ್ನಷ್ಟೇ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ. ಇತ್ತೀಚೆಗೆ ನಿರ್ಬಂಧವನ್ನು ಉಲ್ಲಂಘನೆ ಮಾಡಿ ಮಹಿಳೆಯರು ದೇವಾಲಯ ಪ್ರವೇಶಿಸಲು ಯತ್ನಿಸುತ್ತಿರುವುದರಿಂದ ಹೆಚ್ಚಾಗಿ ಕಂಡು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ವಂ ಬೋರ್ಡ್ ತಿಳಿಸಿದೆ.
