LATEST NEWS
ಆಗುಂಭೆ ಘಾಟ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸಾವು…!!

ಕಾರ್ಕಳ ಜೂನ್ 18 : ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಲದಲ್ಲೇ ಸಾವನಪ್ಪಿದ್ದು, ಬೈಕ್ ನಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಆಗುಂಬೆ ಘಾಟಿಯ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿ ಭಾಗದಲ್ಲಿ ಸಂಭವಿಸಿದೆ.
ಮೃತ ಯುವಕನನ್ನು ಬಾರ್ಕೂರು ಮೂಲದ ಶಶಾಂಕ್ (21) ಎಂದು ಗುರುತಿಸಲಾಗಿದೆ. ಆತನ ಜೊತೆಯಲ್ಲಿದ್ದ ಯುವತಿ ನಿರ್ಮೀತಾ(19) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಶಿವಮೊಗ್ಗದಿಂದ ಉಡುಪಿ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಶಶಾಂಕ್ ಮತ್ತು ನಿರ್ಮಿತಾ ಶಿವಮೊಗ್ಗದಿಂದ ಉಡುಪಿ ಕಡೆಗೆ ಬೈಕ್ ನಲ್ಲಿ ಸಾಗುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ಸು ಆಗುಂಬೆ ಘಾಟಿಯ 12ನೇ ತಿರುವಿನ ಬಳಿ ಡಿಕ್ಕಿ ಹೊಡೆದಿದ್ದು, ಯುವಕ ಶಶಾಂಕ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.