LATEST NEWS
ಆಗುಂಬೆ ಘಾಟಿ: ಭಾರಿ ವಾಹನ ಸಂಚಾರ ನಿಷೇಧ ತೆರವು
ಉಡುಪಿ ಜುಲೈ 9 : ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಮಳೆಗಾಲದ ಸಂದರ್ಭ ಆಗುಂಬೆ ಘಾಟಿಯಲ್ಲಿ ಮಳೆಗಾಲದ ಸಂದರ್ಭ ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಡುಪಿ ಜಿಲ್ಲಾಡಳಿತ ಆದೇಶಿಸಿತ್ತು.
ಆದರೆ ಸದ್ಯ ಮಳೆ ಕಡಿಮೆ ಇರುವ ಹಿನ್ನಲೆ ಮಳೆ ಹೆಚ್ಚಾಗುವವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು, ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿರುತ್ತಾರೆ.