LATEST NEWS
ಮಾರ್ಚ್ 5 ರಿಂದ 15 ರವರೆಗೆ ಆಗುಂಬೆ ಘಾಟ್ ನಲ್ಲಿ ಹಗಲು ಸಂಚಾರ ಬಂದ್

ಶಿವಮೊಗ್ಗ ಮಾರ್ಚ್ 3: ರಸ್ತೆ ದುರಸ್ಥಿ ಕಾರ್ಯ ಆರಂಭವಾಗಲಿರುವ ಹಿನ್ನಲೆ ಆಗುಂಬೆ ಘಾಟಿಯಲ್ಲಿ ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಹಗಲು ವೇಳೆ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಲಘು ವಾಹನಗಳು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಉಡುಪಿ. ಮಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟಿ, ಕಾರ್ಕಳ ಮೂಲಕ ಉಡುಪಿ ತಲುಪಬಹುದು, ಭಾರಿ ವಾಹನಗಳು ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಸಾಗಬೇಕು ಎಂದು ಪ್ರಕಟಣೆ ತಿಳಿಸಿದೆ.