Connect with us

LATEST NEWS

ನ.21 ಕ್ಕೆ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಕರಾವಳಿಗೆ

ನ.21 ಕ್ಕೆ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಕರಾವಳಿಗೆ

ಉಡುಪಿ, ಅಕ್ಟೋಬರ್ 19: ಕಾಂಗ್ರೆಸ್ ಯುವರಾಜ ಹಾಗೂ ಎ ಐ ಸಿ ಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕರಾವಳಿಗೆ ಭೇಟಿ ನೀಡಲಿದ್ದಾರೆ.

ಇದೇ ನವೆಂಬರ್ 21 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ಆಯೋಜಿಸಿರುವ ಮೀನುಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಈ ಕುರಿತು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಯು. ಆರ್. ಸಭಾಪತಿ ಕುಮಟಾದಲ್ಲಿ ನಡೆಯಲಿರುವ ಮೀನುಗಾರರ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು  ಭಾಗವಹಿಸಲಿದ್ದಾರೆ ಎಂದು ಹೇಳಿದರು. ಈ ಸಮಾವೇಶದಲ್ಲಿ 1 ಲಕ್ಷಕ್ಕೂ ಮಿಕ್ಕಿ ಮೀನುಗಾರರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಕೇಂದ್ರ ಸಂಪುಟದಲ್ಲಿ ಮೀನುಗಾರಿಕೆ ಪ್ರತ್ಯೇಕ ಖಾತೆ ಹಾಗೂ ಮೀನುಗಾರ ಸಮುದಾಯವನ್ನು ಎಸ್. ಟಿ ಪಂಗಡಕ್ಕೆ ಸೇರಿಸಬೇಕು ಹೀಗೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *