Connect with us

    LATEST NEWS

    ಸಾರ್ವಜನಿಕರು ಏಡ್ಸ್ ರೋಗದ ಬಗ್ಗೆ ಜಾಗೃತಿ ವಹಿಸಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

    ಉಡುಪಿ, ಡಿಸೆಂಬರ್ 02 : ಏಡ್ಸ್ ರೋಗದ ಬಗ್ಗೆ ಜಾಗೃತರಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿದಾಗ ಮಾತ್ರ ಈ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.


    ಅವರು ಇಂದು ನಗರದ ಮಿನಿ ಟೌನ್ ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿದ್ಯಾರತ್ನ ಸ್ಕೂಲ್ ಕಾಲೇಜ್ ಆಫ್ ನರ್ಸಿಂಗ್, ಲಯನ್ಸ್ ಕ್ಲಬ್ ಉಡುಪಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್‌ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಏಡ್ಸ್ ದಿನ, ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    ಹೆಚ್.ಐ.ವಿ/ಏಡ್ಸ್ ಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡುವುದರ ಮೂಲಕ, ಶೀಘ್ರದಲ್ಲಿ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸುವುದರಿಂದ ರೋಗ ಹರಡುವುದನ್ನು ತಡೆಯಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ
    ಮೂಡಿಸಬೇಕು ಎಂದರು. ಉಡುಪಿ ಜಿಲ್ಲೆಯಲ್ಲಿ ನಿಗಧಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪಾಸಿಟಿವಿಟಿ ರೇಟ್ ಕೂಡ ಕಡಿಮೆಯಿದೆ. ಸ್ವಯಂ ಸೇವಾ ಸಂಸ್ಥೆಗಳು, ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಹೆಚ್.ಐ.ವಿ ಏಡ್ಸ್ ಕುರಿತ ಸಂಶಯಗಳು ಮತ್ತು ಊಹಾಪೋಹಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1097 ಮೂಲಕ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply