LATEST NEWS
ಗುದದ್ವಾರದಲ್ಲಿ ಚಿನ್ನ ಸಾಗಾಟ ಮಾಡಿ ಸಿಕ್ಕಿಬಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಗಗನಸಖಿ
ಕಣ್ಣೂರು ಮೇ 31: ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಗಗನಸಖಿಯನ್ನು ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದೆ. ಮಸ್ಕತ್‌ನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ IX714 ವಿಮಾನದಲ್ಲಿ ಗಗನಸಖಿಯಾಗಿರುವ ಸುರಭಿ ಕಣ್ಣೂರಿಗೆ ಬಂದಿದ್ದಾರೆ ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಸುರಭಿ ಆಕೆಯ ಬಳಿಯಿದ್ದ 960 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಚಿನ್ನವನ್ನು ರೂಪದಲ್ಲಿ ಆಕೆಯ ಗುದನಾಳದಲ್ಲಿ ಬಚ್ಚಿಟ್ಟಿತ್ತು ಎಂದು ತಿಳಿದು ಬಂದಿದೆ.
ಪ್ರಾಥಮಿಕ ವಿಚಾರಣೆಯ ನಂತರ ಆಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ರಿಮಾಂಡ್ ನಲ್ಲಿದ್ದ ಸುರಭಿಯನ್ನು ಕಣ್ಣೂರಿನ ಜೈಲಿಗೆ ವರ್ಗಾಯಿಸಲಾಗಿತ್ತು. ಈ ನಡುವೆ ಡಿಆರ್ ಐ ಈ ಪ್ರಕರಣದ ಬಗ್ಗೆ ಮತ್ತಷ್ಟು ತನಿಖೆ ಆರಂಭಿಸಿದ್ದು, ಈ ಹಿಂದೆಯೂ ಸುರಭಿ ಚಿನ್ನ ಕಳ್ಳಸಾಗಣೆಯಲ್ಲಿ ತೊಡಗಿದ್ದರು ಎನ್ನುವುದನ್ನು ಅಧಿಕಾರಿಗಳು ಸಂಗ್ರಹಿಸಿರುವ ಸಾಕ್ಷ್ಯಾಧಾರಗಳು ಸೂಚಿಸುತ್ತವೆ. ಚಿನ್ನ ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿ ಕೇರಳದ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.